ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ
ಚೆಟ್ಟಳ್ಳಿ : ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡುವ ಉಚಿತ ಸೈಕಲ್ ಅನ್ನು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಿ.ಪಿ ಜಯಾನಂದ ವಿತರಿಸಿದರು. ಈ ಸಂದರ್ಭ ಮಾತನಾಡಿದ ಪಿ.ಪಿ ಜಯಾನಂದ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದು , ಒಳ್ಳೆಯ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದರು. ಶಾಲೆಯ ಆಡಳಿತ ಮಂಡಳಿಯ ಸಂಚಾಲಕರಾದ ಮುಳ್ಳಂಡ ರತ್ತು ಚಂಗಪ್ಪ ಮಾತನಾಡಿ ಸರ್ಕಾರವು ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ಯೋಜನೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಜಿ.ಸಿ ಸತ್ಯನಾರಾಯಣ, ಆಡಳಿತ ಮಂಡಳಿಯ ಸದಸ್ಯರಾದ ದಂಬೆಕೋಡಿ ಹರೀಶ್ ಹಾಗೂ ಶಿಕ್ಷಕ ವೃಂದವರು ಇದ್ದರು