Posts

Showing posts from October, 2019

ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

Image
ಚೆಟ್ಟಳ್ಳಿ : ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡುವ ಉಚಿತ ಸೈಕಲ್ ಅನ್ನು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಿ.ಪಿ‌ ಜಯಾನಂದ ವಿತರಿಸಿದರು. ಈ ಸಂದರ್ಭ ಮಾತನಾಡಿದ ಪಿ.ಪಿ ಜಯಾನಂದ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದು , ಒಳ್ಳೆಯ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದರು. ಶಾಲೆಯ ಆಡಳಿತ ಮಂಡಳಿಯ ಸಂಚಾಲಕರಾದ ಮುಳ್ಳಂಡ ರತ್ತು ಚಂಗಪ್ಪ ಮಾತನಾಡಿ ಸರ್ಕಾರವು ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ಯೋಜನೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಜಿ‌.ಸಿ ಸತ್ಯನಾರಾಯಣ, ಆಡಳಿತ ಮಂಡಳಿಯ ಸದಸ್ಯರಾದ ದಂಬೆಕೋಡಿ ಹರೀಶ್ ಹಾಗೂ ಶಿಕ್ಷಕ ವೃಂದವರು ಇದ್ದರು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರಕಿಯಾಗಿ ಸೋನಿಯಾ ಗಾಂಧಿ

Image
ನವದೆಹಲಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಶನಿವಾರ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತೆ ಸ್ಟಾರ್ ಪ್ರಚಾರಕರಾಗಿ ಮರಳಿದ್ದಾರೆ.ಅಕ್ಟೋಬರ್ 21ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಚಾರದಿಂದ ದೂರು ಉಳಿದಿದ್ದ ಸೋನಿಯಾ ಗಾಂಧಿ ಅವರು ಮತ್ತೆ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದು, ಈಗ ಚುನಾವಣಾ ಪ್ರಚಾರಕ್ಕೆ ಮರಳಿದ್ದಾರೆ.2014ರ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 288 ಸ್ಥಾನಗಳ ಪೈಕಿ ಕಾಂಗ್ರೆಸ್ ಕೇವಲ 42 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಇನ್ನು ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿತ್ತು.